ಬೆಂಗಳೂರು

ಬೆಂಗಳೂರು ಸಮೀಪ ‘ನಾಲೆಡ್ಜ್‌ -ಹೆಲ್ತ್‌- ಇನ್ನೋವೇಶನ್ ಅಂಡ್ ರೀಸರ್ಚ್‌’ಸಿಟಿ: ಸಚಿವ ಎಂ.ಬಿ.ಪಾಟೀಲ

ಬೆಂಗಳೂರು: ನಗರದ ಹೊರವಲಯದಲ್ಲಿ ಸುಮಾರು 2000 ಎಕರೆ ಪ್ರದೇಶದಲ್ಲಿ ‘ನಾಲೆಡ್ಜ್‌ -ಹೆಲ್ತ್‌- ಇನ್ನೋವೇಶನ್ ಅಂಡ್ ರೀಸರ್ಚ್‌’ ಸಿಟಿ ಸ್ಥಾಪಿಸುವ ಉದ್ದೇಶವಿದ್ದು, ಯೋಜನೆಗೆ ಶೀಘ್ರದಲ್ಲೇ ಚಾಲನೆ ನೀಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಹೇಳಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ 100 ದಿನ ಪೂರೈಸಿದ ಸಂದರ್ಭದಲ್ಲಿ ಇಲಾಖೆಯ ಸಾಧನೆಗಳು, ಕೈಗೊಂಡಿರುವ ಪ್ರಮುಖ ಕ್ರಮಗಳ ಬಗ್ಗೆ ಮಾಹಿತಿ ನೀಡಲು ವಿಧಾನಸೌಧದಲ್ಲಿ ಶುಕ್ರವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. “ಬೆಂಗಳೂರು ಹೊರವಲಯದಲ್ಲಿ ಸುಮಾರು […]

ಬೆಂಗಳೂರು ಸಮೀಪ ‘ನಾಲೆಡ್ಜ್‌ -ಹೆಲ್ತ್‌- ಇನ್ನೋವೇಶನ್ ಅಂಡ್ ರೀಸರ್ಚ್‌’ಸಿಟಿ: ಸಚಿವ ಎಂ.ಬಿ.ಪಾಟೀಲ Read More »

ಭಾನುವಾರ ಕಾಂಗ್ರೆಸ್ ಪ್ರಚಾರ ಸಮಿತಿ ಸಭೆ, ಲೋಕಸಭೆ ಚುನಾವಣೆ ಮೇಲೆ ಕಣ್ಣು

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದ ರಾಜ್ಯ ಕಾಂಗ್ರೆಸ್ ಪಾಳೆಯ ಮುಂಬರುವ ಲೋಕಸಭಾ ಚುನಾವಣೆಯ ಮೇಲೆ ಕಣ್ಣಿಟ್ಟಿದ್ದು, ಇದರ ಅಂಗವಾಗಿ ಕೆಪಿಸಿಸಿ ಕಚೇರಿಯಲ್ಲಿ ರಾಜ್ಯ ಮತ್ತು ಜಿಲ್ಲಾ ಪ್ರಚಾರ ಸಮಿತಿಯ ಪದಾಧಿಕಾರಿಗಳ ಸಭೆಯನ್ನು ಭಾನುವಾರ (ಸೆ.3) ಕರೆಯಲಾಗಿದೆ. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರೂ ಆಗಿರುವ ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಸೇರಿದಂತೆ ಹಲವು ನಾಯಕರು ಈ ಸಭೆಯಲ್ಲಿ ಮಾತನಾಡಲಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಯಶಸ್ಸಿಗೆ ದುಡಿದ ಪ್ರಚಾರ ಸಮಿತಿಯ ರಾಜ್ಯ, ಜಿಲ್ಲಾ ಹಾಗೂ

ಭಾನುವಾರ ಕಾಂಗ್ರೆಸ್ ಪ್ರಚಾರ ಸಮಿತಿ ಸಭೆ, ಲೋಕಸಭೆ ಚುನಾವಣೆ ಮೇಲೆ ಕಣ್ಣು Read More »

ಬ್ಲ್ಯಾಕ್ ಮೇಲ್ ಗಳಿಗೆಲ್ಲ ನಾನು ಹೆದರಲ್ಲ, ಕೆಲಸ ಮಾಡಿದವರಿಗೆ ವ್ಯವಸ್ಥಿತವಾಗಿ ಬಿಲ್ ಪಾವತಿ ಆಗಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಸರಿಯಾಗಿ ಕೆಲಸ ಮಾಡಿದ ಗುತ್ತಿಗೆದಾರರಿಗೆ ಬಿಲ್ ಪಾವತಿ ಆಗಲಿದೆ. ಯಾವ ಗುತ್ತಿಗೆದಾರರ ಹಿಂದೆ ಯಾರಿದ್ದಾರೆ ಅಂತಲೂ ನನಗೆ ಗೊತ್ತಿದೆ. ನಾವು ಕಾನೂನು ಪ್ರಕಾರವಾಗಿ ಕೆಲಸ ಮಾಡುತ್ತಿದ್ದು, ಇಂತಹ ಬ್ಲ್ಯಾಕ್ ಮೇಲ್ ಗಳಿಗೆಲ್ಲ ಈ ಡಿ.ಕೆ. ಶಿವಕುಮಾರ್ ಹೆದರುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸಂದೇಶ ರವಾನಿಸಿದ್ದಾರೆ. ಕುಮಾರಕೃಪ ಅತಿಥಿಗೃಹದ ಬಳಿ ಮಾಧ್ಯಮಗಳು ಮಂಗಳವಾರ, ಗುತ್ತಿಗೆದಾರರು ತಮ್ಮ ಬಿಲ್ ಪಾವತಿ ಆಗದಿರುವ ಬಗ್ಗೆ ರಾಜ್ಯಪಾಲರಿಗೆ ಪತ್ರ ಬರೆಯುವ ಬಗ್ಗೆ ಕೇಳಿದ ಪ್ರಶ್ನೆಗೆ ಡಿ.ಕೆ. ಶಿವಕುಮಾರ್ ಅವರು

ಬ್ಲ್ಯಾಕ್ ಮೇಲ್ ಗಳಿಗೆಲ್ಲ ನಾನು ಹೆದರಲ್ಲ, ಕೆಲಸ ಮಾಡಿದವರಿಗೆ ವ್ಯವಸ್ಥಿತವಾಗಿ ಬಿಲ್ ಪಾವತಿ ಆಗಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ Read More »

ಚೆಲುವರಾಯಸ್ವಾಮಿ ವಿರುದ್ದ ಪತ್ರ: ಪೊಲೀಸ್ ತನಿಖೆಗೆ ಸೂಚನೆ ಸಿಎಂ ಸಿದ್ದರಾಮಯ್ಯ*

ಬೆಂಗಳೂರು, ಆಗಸ್ಟ್ 08: ಕೃಷಿ ಸಚಿವ ಚೆಲುವರಾಯಸ್ವಾಮಿ ಅವರ ವಿರುದ್ಧ ಬರೆದಿರುವ ಪತ್ರದ ಬಗ್ಗೆ ಪೊಲೀಸರಿಗೆ ತನಿಖೆ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ನಿಜಲಿಂಗಪ್ಪ ಅವರ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೆಯ ಬಳಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಪತ್ರ ಅಸಲಿ ಎಂದು ಮಾಜಿ ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದಾರೆ ಎಂಬ ಬಗ್ಗೆ ಉತ್ತರಿಸಿ ಈ

ಚೆಲುವರಾಯಸ್ವಾಮಿ ವಿರುದ್ದ ಪತ್ರ: ಪೊಲೀಸ್ ತನಿಖೆಗೆ ಸೂಚನೆ ಸಿಎಂ ಸಿದ್ದರಾಮಯ್ಯ* Read More »

woman DCM Patta

ಬ್ರದರ್ರೋ ಎಂದು ಕೆಣಕಿದ ಸಿದ್ದರಾಮಯ್ಯಗೆ ಟಿಕ್ ಟಿಕ್ ಸಿದ್ದರಾಮಯ್ಯ ಎಂದು ಛೇಡಿಸಿದ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಅಧಿಕಾರಿಗಳಿಂದ ವಸೂಲಿ ಆರೋಪ ಎದುರಿಸುತ್ತಿರುವ ಕೃಷಿ ಸಚಿವ ಚೆಲುವರಾಯಸ್ವಾಮಿ ಅವರ ವಿರುದ್ಧ ರಾಜ್ಯಪಾಲರಿಗೆ 7 ಅಧಿಕಾರಿಗಳು ಬರೆದಿರುವ ದೂರಿನ ಪತ್ರದ ಸೃಷ್ಟಿಕರ್ತರು “ನಿಮ್ಮ ಬ್ರದರ್ರೋ”? ಎಂದು ಕೆಣಕಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿಗಳು; ಸಿದ್ದರಾಮಯ್ಯ ಅವರನ್ನು ಟಿಕ್ ಟಿಕ್ ಸಿದ್ದರಾಮಯ್ಯ ಎಂದು ಕಾಲೆಳೆದಿದ್ದಾರೆ. ಅಲ್ಲದೆ, #YstTax #CashForPosting ಹ್ಯಾಷ್ ಟ್ಯಾಗ್ ಹಾಕಿ ಟಾಂಗ್ ನೀಡಿದ್ದಾರೆ. ಮಂತ್ರಿಗಳ ಮಾನಗೇಡಿ

ಬ್ರದರ್ರೋ ಎಂದು ಕೆಣಕಿದ ಸಿದ್ದರಾಮಯ್ಯಗೆ ಟಿಕ್ ಟಿಕ್ ಸಿದ್ದರಾಮಯ್ಯ ಎಂದು ಛೇಡಿಸಿದ ಹೆಚ್.ಡಿ.ಕುಮಾರಸ್ವಾಮಿ Read More »

ಕಾಂಗ್ರೆಸ್ ಸರಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಆರೋಪಗಳ ಸುರಿಮಳೆ

ಬೆಂಗಳೂರು: ವಿದೇಶ ಪ್ರವಾಸದಿಂದ ಹಿಂದಿರುಗಿದ ತಕ್ಷಣದಿಂದಲೇ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ವರ್ಗಾವಣೆ ದಂಧೆ, ಭ್ರಷ್ಟಾಚಾರ, ಕಮೀಷನ್ ಸಂಗ್ರಹದ ಬಗ್ಗೆ ಗುರುತರ ಆರೋಪಗಳನ್ನು ಮಾಡಿದ್ದಾರೆ. ಕಳೆದ ರಾತ್ರಿ ಅವರು ಯುರೋಪ್ ಪ್ರವಾಸ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಬಂದರು. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಮ್ಮನ್ನು ಭೇಟಿಯಾದ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಅವರು ಉತ್ತರ ನೀಡಿದರು. ಕಾಂಗ್ರೆಸ್ ಪಕ್ಷ ಈಸ್ಟ್ ಇಂಡಿಯಾ ಪಕ್ಷದಂತೆ ರಾಜ್ಯವನ್ನು ಲೂಟಿ ಮಾಡುತ್ತಿದೆ. ಪೊಲೀಸ್ ವರ್ಗಾವಣೆಯಲ್ಲಿ ವೈಎಸ್ ಟಿ

ಕಾಂಗ್ರೆಸ್ ಸರಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಆರೋಪಗಳ ಸುರಿಮಳೆ Read More »

ಫಾಕ್ಸ್‌ಕಾನ್‌ನಿಂದ ರಾಜ್ಯದಲ್ಲಿ 5000 ಕೋಟಿ ರೂ. ಹೂಡಿಕೆ 13,000 ಉದ್ಯೋಗ ಸೃಷ್ಟಿ , 2 ಪ್ರಮುಖ ಯೋಜನೆಗಳ ಉದ್ದೇಶಿತ ಹೂಡಿಕೆ ಒಪ್ಪಂದ ಪತ್ರಕ್ಕೆ ಫಾಕ್ಸ್‌ಕಾನ್‌ ಸಹಿ: ಎಂ.ಬಿ.ಪಾಟೀಲ

ಬೆಂಗಳೂರು: ಕರ್ನಾಟಕದಲ್ಲಿ ಬರೋಬ್ಬರಿ 5000 ಕೋಟಿ ರೂ. ಮೊತ್ತದ ಬಂಡವಾಳ ಹೂಡುವ ಸಂಬಂಧ ರಾಜ್ಯ ಸರ್ಕಾರದೊಂದಿಗೆ ಉದ್ದೇಶಿತ ಹೂಡಿಕೆ ಒಪ್ಪಂದ ಪತ್ರಕ್ಕೆ ಫಾಕ್ಸ್‌ಕಾನ್‌ ಸಹಿ ಮಾಡಿದೆ. ಈ ಯೋಜನೆಗಳಿಂದ 13,000 ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ. ಚೆನ್ನೈನ ಹೋಟೆಲ್ ಲೀಲಾ ಪ್ಯಾಲೇಸ್‌ನಲ್ಲಿ ಸೋಮವಾರ ನಡೆದ ಸಭೆಯಲ್ಲಿ ಫೋನ್ ಎನ್‌ಕ್ಲೋಸರ್ ಉತ್ಪಾದನಾ ಘಟಕ ಸ್ಥಾಪನೆ ಹಾಗೂ ಸೆಮಿಕಾನ್ ಉಪಕರಣಗಳ ಯೋಜನೆ ಜಾರಿ ಸಂಬಂಧ ಕರ್ನಾಟಕ ಸರ್ಕಾರದೊಂದಿಗೆ ಮಾತುಕತೆ ನಡೆಸಿದ ಫಾಕ್ಸ್‌ಕಾನ್ ಅಧ್ಯಕ್ಷ ಯಂಗ್ ಲಿಯು ಉದ್ದೇಶಿತ ಹೂಡಿಕೆ ಒಪ್ಪಂದ ಪತ್ರಕ್ಕೆ ಸಹಿ

ಫಾಕ್ಸ್‌ಕಾನ್‌ನಿಂದ ರಾಜ್ಯದಲ್ಲಿ 5000 ಕೋಟಿ ರೂ. ಹೂಡಿಕೆ 13,000 ಉದ್ಯೋಗ ಸೃಷ್ಟಿ , 2 ಪ್ರಮುಖ ಯೋಜನೆಗಳ ಉದ್ದೇಶಿತ ಹೂಡಿಕೆ ಒಪ್ಪಂದ ಪತ್ರಕ್ಕೆ ಫಾಕ್ಸ್‌ಕಾನ್‌ ಸಹಿ: ಎಂ.ಬಿ.ಪಾಟೀಲ Read More »

ಎಲ್ಲ ಬೆಲೆಗಳ ಏರಿಕೆಯೇ ಕಾಂಗ್ರೆಸ್ ಸರ್ಕಾರದ ಆರನೇ ಗ್ಯಾರೆಂಟಿ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಎಲ್ಲ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಇದು ಕಾಂಗ್ರೆಸ್ ‌ಸರ್ಕಾರದ ದುಬಾರಿ ದುನಿಯಾ. ಈ ಸರ್ಕಾರಕ್ಕೆ ಜನ ಸಾಮಾನ್ಯರು ಹಿಡಿ ಶಾಪ ಹಾಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಈ ಕುರಿತು ಟ್ಚೀಟ್ ಮಾಡಿರುವ ಅವರು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ವಿದ್ಯುತ್ ದರ ಏರಿಕೆ, ಟೊಮೆಟೊ ಸಮೇತ ಎಲ್ಲ ತರಕಾರಿ ಬೆಲೆ ಏರಿಕೆ, ನಂದಿನಿ ಹಾಲು, ಮೊಸರು, ಮಜ್ಜಿಗೆ ಬೆಲೆ ಏರಿಕೆ, ಹೊಟೆಲ್ ಗಳಲ್ಲಿ ತಿಂಡಿಗಳ ಬೆಲೆ ಏರಿಕೆ, ಬಜೆಟ್ ನಲ್ಲಿ

ಎಲ್ಲ ಬೆಲೆಗಳ ಏರಿಕೆಯೇ ಕಾಂಗ್ರೆಸ್ ಸರ್ಕಾರದ ಆರನೇ ಗ್ಯಾರೆಂಟಿ: ಬಸವರಾಜ ಬೊಮ್ಮಾಯಿ Read More »

ಪಾದಚಾರಿಗಳು ಹಾಗೂ ಬೀದಿಬದಿ ವ್ಯಾಪಾರಿಗಳ ಹಿತ ರಕ್ಷಣೆಗೆ ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಬೆಂಗಳೂರು: “ಬೆಂಗಳೂರಿನ ಬಹುತೇಕ ರಸ್ತೆಗಳಲ್ಲಿ ಪಾದಚಾರಿ ಮಾರ್ಗದಲ್ಲಿ ಜನರಿಗೆ ಓಡಾಡಲು ಅವಕಾಶವೇ ಇಲ್ಲವಾಗಿದೆ. ಹೀಗಾಗಿ ಬೀದಿಬದಿ ವ್ಯಾಪಾರಿಗಳ ಹಿತ ರಕ್ಷಣೆ ಜತೆಗೆ ಪಾದಚಾರಿ ಮಾರ್ಗದಲ್ಲಿ ಸುಗಮ ಸಂಚಾರಕ್ಕೆ ಅಗತ್ಯ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಜ್ಞಾನಭಾರತಿ ಸಭಾಂಗಣದ ಬಳಿ ಸೋಮವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಬೀದಿ ಬದಿ ವ್ಯಾಪಾರಿಗಳನ್ನು ಖಾಲಿ ಮಾಡಿಸಬೇಕು ಎಂದು ಅನೇಕ ಒತ್ತಡವಿದೆ. ನಾನೇ ಖುದ್ದಾಗಿ ಪರಿಶೀಲನೆ ನಡೆಸಿದ್ದೇನೆ. ಅನೇಕ ಕಡೆ ರಸ್ತೆಯೇ ಇಲ್ಲ. ಬೀದಿ

ಪಾದಚಾರಿಗಳು ಹಾಗೂ ಬೀದಿಬದಿ ವ್ಯಾಪಾರಿಗಳ ಹಿತ ರಕ್ಷಣೆಗೆ ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ Read More »

ಉಡುಪಿ ಕಾಲೇಜಿನ ಮೊಬೈಲ್ ಚಿತ್ರೀಕರಣ ಪ್ರಕರಣ: ಎಸ್.ಐ.ಟಿಗೆ ವಹಿಸುವ ಪ್ರಶ್ನೆ ಇಲ್ಲ: ಸಿಎಂ ಸಿದ್ದರಾಮಯ್ಯ

ಮಂಗಳೂರು, ಆಗಸ್ಟ್ 01: ಉಡುಪಿ ಕಾಲೇಜೊಂದರಲ್ಲಿ ಮೊಬೈಲ್ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸ್ಯೂ ಮೋಟೋ ಪ್ರಕರಣವನ್ನು ದಾಖಲಿಸಿಕೊಂಡಿದ್ದು ಎಫ್ ಐ ಆರ್ ಆಗಿದೆ. ತನಿಖೆಯನ್ನು ಡಿ ವೈಎಸ್ಪಿ ಮಟ್ಟದ ಅಧಿಕಾರಿ ಮಾಡುತ್ತಿದ್ದು, ಪ್ರಕರಣವನ್ನು ಎಸ್.ಐ.ಟಿಗೆ ವಹಿಸುವ ಪ್ರಶ್ನೆ ಉದ್ಬವವಾಗುವುದಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕೇಂದ್ರ ಮಹಿಳಾ ಆಯೋಗದ ಸದಸ್ಯರು ಆಗಮಿಸಿ ತನಿಖೆ ಕೈಗೊಂಡು ಕಾಲೇಜಿನ ಶೌಚಾಲಯದಲ್ಲಿ ಕ್ಯಾಮರಾ ಇರಲಿಲ್ಲ ಎಂದು ಹೇಳಿದ್ದಾರೆ. ತನಿಖೆಯಾಗಿ ವರದಿ ಬಂದ ನಂತರ

ಉಡುಪಿ ಕಾಲೇಜಿನ ಮೊಬೈಲ್ ಚಿತ್ರೀಕರಣ ಪ್ರಕರಣ: ಎಸ್.ಐ.ಟಿಗೆ ವಹಿಸುವ ಪ್ರಶ್ನೆ ಇಲ್ಲ: ಸಿಎಂ ಸಿದ್ದರಾಮಯ್ಯ Read More »