Karnataka

ಉಡುಪಿ ಕಾಲೇಜಿನ ಮೊಬೈಲ್ ಚಿತ್ರೀಕರಣ ಪ್ರಕರಣ: ಎಸ್.ಐ.ಟಿಗೆ ವಹಿಸುವ ಪ್ರಶ್ನೆ ಇಲ್ಲ: ಸಿಎಂ ಸಿದ್ದರಾಮಯ್ಯ

ಮಂಗಳೂರು, ಆಗಸ್ಟ್ 01: ಉಡುಪಿ ಕಾಲೇಜೊಂದರಲ್ಲಿ ಮೊಬೈಲ್ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸ್ಯೂ ಮೋಟೋ ಪ್ರಕರಣವನ್ನು ದಾಖಲಿಸಿಕೊಂಡಿದ್ದು ಎಫ್ ಐ ಆರ್ ಆಗಿದೆ. ತನಿಖೆಯನ್ನು ಡಿ ವೈಎಸ್ಪಿ ಮಟ್ಟದ ಅಧಿಕಾರಿ ಮಾಡುತ್ತಿದ್ದು, ಪ್ರಕರಣವನ್ನು ಎಸ್.ಐ.ಟಿಗೆ ವಹಿಸುವ ಪ್ರಶ್ನೆ ಉದ್ಬವವಾಗುವುದಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕೇಂದ್ರ ಮಹಿಳಾ ಆಯೋಗದ ಸದಸ್ಯರು ಆಗಮಿಸಿ ತನಿಖೆ ಕೈಗೊಂಡು ಕಾಲೇಜಿನ ಶೌಚಾಲಯದಲ್ಲಿ ಕ್ಯಾಮರಾ ಇರಲಿಲ್ಲ ಎಂದು ಹೇಳಿದ್ದಾರೆ. ತನಿಖೆಯಾಗಿ ವರದಿ ಬಂದ ನಂತರ […]

ಉಡುಪಿ ಕಾಲೇಜಿನ ಮೊಬೈಲ್ ಚಿತ್ರೀಕರಣ ಪ್ರಕರಣ: ಎಸ್.ಐ.ಟಿಗೆ ವಹಿಸುವ ಪ್ರಶ್ನೆ ಇಲ್ಲ: ಸಿಎಂ ಸಿದ್ದರಾಮಯ್ಯ Read More »

ಉತ್ತಮ ಮಳೆ: ರಾಜ್ಯದಲ್ಲಿ ಶೇ *100 ರಷ್ಟು ಬಿತ್ತನೆಯಾಗುವ ನಿರೀಕ್ಷೆ

ಬೆಂಗಳೂರು, ಜುಲೈ 26: ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು,ಬಿತ್ತನೆ ಚುರುಕಾಗಿ ನಡೆಯುತ್ತಿದೆ. ಕೆಲವೇ ದಿನಗಳಲ್ಲಿ ಶೇ 100 ರಷ್ಟು ಬಿತ್ತನೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ಹುತಾತ್ಮ ಯೋಧರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಮಳೆಯಿಂದಾಗಿ ಕೈ ಮೀರಿ ಹೋಗುವ ಪರಿಸ್ಥಿತಿ ನಿರ್ಮಾಣವಾಗಿಲ್ಲ. ಕೆ.ಆರ್.ಎಸ್ , ಕಬಿನಿ, ಹಾರಂಗಿ, ಹೇಮಾವತಿ, ಆಲಮಟ್ಟಿ, ಸೇರಿದಂತೆ ಎಲ್ಲಾ ಜಲಾಶಯಗಳಿಗೆ ನೀರು ಬರುತ್ತಿರುವುದು ರೈತರಿಗೆ ಹಾಗೂ ಸರ್ಕಾರಕ್ಕೆ ಸಂತೋಷ ತಂದಿದೆ. ಹಾವೇರಿಯಲ್ಲಿ

ಉತ್ತಮ ಮಳೆ: ರಾಜ್ಯದಲ್ಲಿ ಶೇ *100 ರಷ್ಟು ಬಿತ್ತನೆಯಾಗುವ ನಿರೀಕ್ಷೆ Read More »

ಅಲ್ಪಸಂಖ್ಯಾತರ ಸಾಂವಿಧಾನಿಕ ಹಕ್ಕುಗಳ ರಕ್ಷಣೆಗೆ ಸರ್ಕಾರ ಬದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಜುಲೈ 26-ರಾಜ್ಯ ಸರ್ಕಾರ ಸಂವಿಧಾನದ ಆಶಯಗಳಿಗೆ ತಕ್ಕಂತೆ ಆದಿವಾಸಿ, ಬುಡಕಟ್ಟು ಮತ್ತು ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸುವ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ. ಈ ಕುರಿತು ಯಾವುದೇ ಆತಂಕ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ತಮ್ಮನ್ನು ಭೇಟಿಯಾದ ಆಲ್‌ ಇಂಡಿಯಾ ಮುಸ್ಲಿಂ ಪರ್ಸನಲ್‌ ಲಾ ಬೋರ್ಡ್‌ ನ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ನಿಯೋಗದ ಮುಖಂಡರು ಏಕರೂಪ ನಾಗರಿಕ ಸಂಹಿತೆ ಜಾರಿಯಿಂದ ಮುಸ್ಲಿಮರು, ಆದಿವಾಸಿ, ಬುಡಕಟ್ಟು ಹಾಗೂ

ಅಲ್ಪಸಂಖ್ಯಾತರ ಸಾಂವಿಧಾನಿಕ ಹಕ್ಕುಗಳ ರಕ್ಷಣೆಗೆ ಸರ್ಕಾರ ಬದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ Read More »

Gruhalakshmi scheme: ಗೃಹಲಕ್ಷ್ಮೀ ಯೋಜನೆಗಾಗಿ ಜನರಿಂದ ಹಣ ಪಡೆದರೆ ಕ್ರಿಮಿನಲ್ ಮೊಕದ್ದಮೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ

ಹಾವೇರಿ: ಗೃಹಲಕ್ಷ್ಮೀ ಯೋಜನೆಗೆ ಹಣ ಪಡೆದಿರುವ ಬಗ್ಗೆ ದೂರು ಹಾಗೂ ಸಾಕ್ಷಿ ಇದ್ದರೆ ಹಣ ಪಡೆದವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಹಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮಳೆಯಿಂದ ಹಾನಿಗೊಳಗಾಗಿರುವ ಜಿಲ್ಲೆಗಳಿಗೆ ಸಚಿವರ ತಂಡದ ಭೇಟಿ ರಾಜ್ಯದ ಬಹುತೇಕ ಕಡೆ ಮಳೆಯಾಗುತ್ತಿದೆ ಜೂನ್ ತಿಂಗಳಲ್ಲಿ ಸ್ವಲ್ಪ ಕೊರತೆಯಾಗಿತ್ತು. ಜುಲೈ ತಿಂಗಳಲ್ಲಿ ವಾಡಿಕೆಗಿಂತ ಮಳೆ ಹೆಚ್ಚಾಗಿದೆ ಎಂದರು. ಹಾವೇರಿಯಲ್ಲಿ ರೈತರು ಮರಣಹೊಂದಿರುವ ಹಿನ್ನೆಲೆಯಲ್ಲಿ ಅಲ್ಲಿಗೆ ಭೇಟಿ ನೀಡುತ್ತಿದ್ದು, ಮಳೆ ಹೆಚ್ಚಾಗಿ ಬಿದ್ದಿರುವ

Gruhalakshmi scheme: ಗೃಹಲಕ್ಷ್ಮೀ ಯೋಜನೆಗಾಗಿ ಜನರಿಂದ ಹಣ ಪಡೆದರೆ ಕ್ರಿಮಿನಲ್ ಮೊಕದ್ದಮೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ Read More »

Karnataka Rains: ರಾಜ್ಯದಲ್ಲಿ ಚುರುಕಾದ ಮಳೆ, ಜುಲೈನಲ್ಲಿ ವಾಡಿಕೆಗಿಂತ ಅಧಿಕ ಮಳೆ, ಮುನ್ನೆಚ್ಚರಿಕಾ ಕ್ರಮವಹಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ: ಸಚಿವ ಕೃಷ್ಣಭೈರೇಗೌಡ

ಬೆಂಗಳೂರು: ಮಲೆನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಕಳೆದ ಒಂದು ವಾರದಿಂದ ಉತ್ತಮ ಮಳೆಯಾಗುತ್ತಿದ್ದು, ಜನ-ಜೀವನ ಹಾಗೂ ಆಸ್ತಿ-ಪಾಸ್ತಿ ಹಾನಿಯಾಗದಂತೆ ಮುನ್ನೆಚ್ಚರಿಕಾ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ಸೋಮವಾರ ವಿಕಾಸಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿರುವ ಸಚಿವರು, “ಜೂನ್ ತಿಂಗಳಲ್ಲಿ ರಾಜ್ಯಕ್ಕೆ ಮಳೆ ಶೇ.56ರಷ್ಟು ಕೊರತೆಯಾಗಿತ್ತು. ಆದರೆ ಜುಲೈ ತಿಂಗಳಿನಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಿದೆ. ಹೀಗಾಗಿ ಮಳೆ ಕೊರತೆಯ ಪ್ರಮಾಣ ಶೇ.56 ರಿಂದ ಶೇ.14ಕ್ಕೆ ಇಳಿದಿದೆ. ರಾಜ್ಯದಲ್ಲಿ ಒಟ್ಟಾರೆ ಶೇ.80

Karnataka Rains: ರಾಜ್ಯದಲ್ಲಿ ಚುರುಕಾದ ಮಳೆ, ಜುಲೈನಲ್ಲಿ ವಾಡಿಕೆಗಿಂತ ಅಧಿಕ ಮಳೆ, ಮುನ್ನೆಚ್ಚರಿಕಾ ಕ್ರಮವಹಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ: ಸಚಿವ ಕೃಷ್ಣಭೈರೇಗೌಡ Read More »

Siddaramaiah

ಸಮಾಜದಲ್ಲಿ ಅವಕಾಶ ವಂಚಿತರು ಮತ್ತು ಧ್ವನಿ ಇಲ್ಲದವರನ್ನು ಮುಖ್ಯವಾಹಿನಿಗೆ ತರುವ ನನ್ನ ಪ್ರಯತ್ನ ನಿರಂತರ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಜು 24: ಮಹಾತ್ಮಗಾಂಧಿ, ಅಂಬೇಡ್ಕರ್ ಅವರೂ ಪತ್ರಕರ್ತರಾಗಿ ಪತ್ರಿಕಾ ವೃತ್ತಿಗೆ ಮಾದರಿ ರೂಪಿಸಿಕೊಟ್ಟಿದ್ದಾರೆ. ಧ್ವನಿ ಇಲ್ಲದವರಿಗೆ ಧ್ವನಿ ನೀಡುವುದೇ ಪತ್ರಿಕಾ ವೃತ್ತಿಯ ಉದ್ದೇಶ, ಆಶಯ, ಜವಾಬ್ದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಪ್ರೆಸ್ ಕ್ಲಬ್ ಆಫ್ ಬೆಂಗಳೂರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಮತ್ತು ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು. ಇವತ್ತಿನ ಬಹಳಷ್ಟು ಪತ್ರಕರ್ತರು ಆತ್ಮಾವಲೋಕನ ಮಾಡಿಕೊಳ್ಳಬೇಕು ಎನ್ನುವುದು ನನ್ನ ಭಾವನೆ. ಪತ್ರಿಕಾ ವೃತ್ತಿಯ ಆಶಯಕ್ಕೆ ತಕ್ಕಂತೆ ಇದ್ದೇವಾ, ಇಲ್ಲವಾ

ಸಮಾಜದಲ್ಲಿ ಅವಕಾಶ ವಂಚಿತರು ಮತ್ತು ಧ್ವನಿ ಇಲ್ಲದವರನ್ನು ಮುಖ್ಯವಾಹಿನಿಗೆ ತರುವ ನನ್ನ ಪ್ರಯತ್ನ ನಿರಂತರ : ಮುಖ್ಯಮಂತ್ರಿ ಸಿದ್ದರಾಮಯ್ಯ Read More »

Karnataka News: ವಿರೋಧಪಕ್ಷದವರಿಲ್ಲದೇ ಬಜೆಟ್ ಚರ್ಚೆಗೆ ಉತ್ತರ ನೀಡಿದ್ದು ಇದೇ ಮೊದಲು : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಜುಲೈ 22 : ತಮ್ಮ 40 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಹಾಗೂ 14 ಬಾರಿ ಬಜೆಟ್ ಮಂಡಿಸಿದ ಸಂದರ್ಭದಲ್ಲಿ ಇದೇ ಮೊದಲ ಬಾರಿ ವಿರೋಧ ಪಕ್ಷದ ಉಪಸ್ಥಿತಿಯಿಲ್ಲದೇ ಬಜೆಟ್ ಚರ್ಚೆಗೆ ಉತ್ತರ ನೀಡುವಂತಹ ಪರಿಸ್ಥಿತಿ ಒದಗಿಬಂದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿಯವರು ಪ್ರೀಡಂಪಾರ್ಕ್ ನಲ್ಲಿ ಪ್ರತಿಭಟನೆ ಕೈಗೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ವಿಧಾನಮಂಡಲದ ಅಧಿವೇಶನದಲ್ಲಿ ಜನರ ಸಮಸ್ಯೆಗಳ ಬಗ್ಗೆ ಚರ್ಚಿಸುವುದು ಬಿಟ್ಟು, ಹೊರಗೆ ಹೋರಾಟ ಮಾಡುವುದರಿಂದ ಪ್ರಯೋಜನವಿಲ್ಲ.

Karnataka News: ವಿರೋಧಪಕ್ಷದವರಿಲ್ಲದೇ ಬಜೆಟ್ ಚರ್ಚೆಗೆ ಉತ್ತರ ನೀಡಿದ್ದು ಇದೇ ಮೊದಲು : ಮುಖ್ಯಮಂತ್ರಿ ಸಿದ್ದರಾಮಯ್ಯ Read More »

Bengaluru News: ಕನಕಪುರದ ಕರ್ನಾಟಕ ಒನ್ ಸೇವಾ ಕೇಂದ್ರಕ್ಕೆ ಡಿಸಿಎಂ ದಿಢೀರ್ ಭೇಟಿ: ಗೃಹಲಕ್ಷಿ ನೋಂದಣಿ ಪ್ರಕ್ರಿಯೆ ಪರಿಶೀಲನೆ

ಬೆಂಗಳೂರು: ಡಿಸಿಎಂ ಡಿ ಕೆ ಶಿವಕುಮಾರ್ ಅವರು ರಾಮನಗರ ಜಿಲ್ಲೆ ಕನಕಪುರದ ಕರ್ನಾಟಕ ಒನ್ ಸಮಗ್ರ ನಾಗರಿಕ ಸೇವಾ ಕೇಂದ್ರಕ್ಕೆ ದಿಢೀರ್ ಭೇಟಿ ಕೊಟ್ಟು ಗೃಹಲಕ್ಷ್ಮಿ ನೋಂದಣಿ ಪ್ರಕ್ರಿಯೆಯನ್ನು (gruha lakshmi scheme in kannada) ಖುದ್ದು ಪರಿಶೀಲಿಸಿದರು. ಡಿಸಿಎಂ ಶಿವಕುಮಾರ್ ಅವರು ಕನಕಪುರದ ಎಸ್ ಎಲ್ ಎನ್ ರಸ್ತೆಯ ಕರ್ನಾಟಕ ಒನ್ ಕೇಂದ್ರಕ್ಕೆ ಶುಕ್ರವಾರ ಸಂಜೆ ಭೇಟಿ ಕೊಟ್ಟಾಗ ಅಲ್ಲಿನ ಸಿಬ್ಬಂದಿ ಒಂದು ಕ್ಷಣ ಅವಕ್ಕಾದರು. ತಮ್ಮ ಹೆಸರು ನೋಂದಣಿ ಮಾಡಲು ಬಂದಿದ್ದ ಮಹಿಳೆಯರು ಕೂಡ

Bengaluru News: ಕನಕಪುರದ ಕರ್ನಾಟಕ ಒನ್ ಸೇವಾ ಕೇಂದ್ರಕ್ಕೆ ಡಿಸಿಎಂ ದಿಢೀರ್ ಭೇಟಿ: ಗೃಹಲಕ್ಷಿ ನೋಂದಣಿ ಪ್ರಕ್ರಿಯೆ ಪರಿಶೀಲನೆ Read More »

ಇಂಡಿಯಾ ಜಪ ಮಾಡಿದ್ದ ಕಾಂಗ್ರೆಸ್ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ,ಸಾಂವಿಧಾನಿಕ ಮೌಲ್ಯಗಳನ್ನು ಕಸಕ್ಕೆ ಸಮ ಎಂದುಕೊಂಡಿದೆ ಕಾಂಗ್ರೆಸ್

ಬೆಂಗಳೂರು: ವಿಧಾನಸಭೆಯಲ್ಲಿಂದು ಪ್ರತಿಪಕ್ಷ ಶಾಸಕರನ್ನು ಅಮಾನತು ಮಾಡಿದ ಕ್ರಮವನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಠಿಣ ಶಬ್ದಗಳಲ್ಲಿ ಖಂಡಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು; ಒಂದು ದಿನದ ಹಿಂದೆ ‘ ಇಂಡಿಯಾ ‘ ಎಂದು ಬೆಂಗಳೂರಿನಲ್ಲಿ ಜಪ ಮಾಡಿದ್ದ ಕಾಂಗ್ರೆಸ್, 24 ಗಂಟೆ ಒಳಗಾಗಿ ಇದೇ ನಗರದಲ್ಲಿ ಇಂಡಿಯಾ ಎನ್ನುವ ಇಡಿಯಾದ ಆದರ್ಶ ಪರಿಕಲ್ಪನೆಗೆ ಎಳ್ಳುನೀರು ಬಿಟ್ಟಿದೆ. ಪ್ರಜಾಪ್ರಭುತ್ವದ ಮೇಲೆ ನಂಬಿಕೆಯೇ ಇಲ್ಲದ ಕಾಂಗ್ರೆಸ್, ಸಾಂವಿಧಾನಿಕ ಮೌಲ್ಯಗಳನ್ನು ಕಸಕ್ಕೆ ಸಮ ಎನ್ನುವಂತೆ ವರ್ತಿಸಿದೆ ಎಂದು ಕಿಡಿ

ಇಂಡಿಯಾ ಜಪ ಮಾಡಿದ್ದ ಕಾಂಗ್ರೆಸ್ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ,ಸಾಂವಿಧಾನಿಕ ಮೌಲ್ಯಗಳನ್ನು ಕಸಕ್ಕೆ ಸಮ ಎಂದುಕೊಂಡಿದೆ ಕಾಂಗ್ರೆಸ್ Read More »

ಶರಾವತಿ ಸಂತ್ರಸ್ತರ ಪ್ರಕರಣ,ಸುಪ್ರೀಂಕೋರ್ಟ್ ಗೆ ಐ.ಎ ಸಲ್ಲಿಕೆ: ಈಶ್ವರ ಖಂಡ್ರೆ

ಬೆಂಗಳೂರು, ಜು.18: ಶರಾವತಿ ಕಣಿವೆ ಜಲವಿದ್ಯುತ್‌ ಯೋಜನೆ ಭೂ ಮಂಜೂರಾತಿ ಉದ್ದೇಶಕ್ಕಾಗಿ ಸರ್ಕಾರ ಮಾಡಿದ್ದ ಡಿನೋಟಿಫಿಕೇಷನ್‌ ಆದೇಶವನ್ನು ರದ್ದು ಮಾಡಿರುವ ಹಿನ್ನೆಲೆಯಲ್ಲಿ ಸಂಪೂರ್ಣ ಮಾಹಿತಿ ಪಡೆದು, ಸುಪ್ರೀಂಕೋರ್ಟ್ ಗೆ ನಿಯಮಾನುಸಾರ ಐ.ಎ. ಸಲ್ಲಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ಶಿವಮೊಗ್ಗ ಜಿಲ್ಲೆಯ ಶರಾವತಿ ಕಣಿವೆ ಜಲ ವಿದ್ಯುತ್ ಯೋಜನೆಯ ಸಂತ್ರಸ್ತರು ಹಾಗೂ ಅರಣ್ಯ ಹಕ್ಕು ಭೂ ಮಂಜೂರಾತಿ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸಲು ಶಿವಮೊಗ್ಗ

ಶರಾವತಿ ಸಂತ್ರಸ್ತರ ಪ್ರಕರಣ,ಸುಪ್ರೀಂಕೋರ್ಟ್ ಗೆ ಐ.ಎ ಸಲ್ಲಿಕೆ: ಈಶ್ವರ ಖಂಡ್ರೆ Read More »