ಗುಡ್ ನ್ಯೂಸ್: ಪಿಯುಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯಿಂದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ

ಸರಕಾರಿ ಉದ್ಯೋಗ ಪಡೆಯಲು ನಡೆಸುವ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ವಿಶೇಷವಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಮಾಹಿತಿ ಇರುವುದಿಲ್ಲ. ಮನೆಯಲ್ಲಿ ಹತ್ತವರು ವಿದ್ಯವಂತರಾಗಿದ್ದರೆ, ಸರಕಾರಿ, ಬ್ಯಾಂಕ್‌ ಪರೀಕ್ಷೆಗಳ ಕುರಿತು ಮಾಹಿತಿ ಹೊಂದಿದ್ದರೆ ತಮ್ಮ ಮಕ್ಕಳನ್ನು ಇಂತಹ ಪರೀಕ್ಷೆ ತೆಗೆದುಕೊಳ್ಳುವಂತೆ ಪ್ರೋತ್ಸಾಹಿಸುತ್ತಾರೆ. ಆದರೆ, ಬಹುತೇಕ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಇಂತಹ ಮಾಹಿತಿಯನ್ನು ನೀಡುವವರು ಇಲ್ಲದೆ ಅತ್ಯುತ್ತಮ ಅವಕಾಶಗಳಿಂದ ವಂಚಿತರಾಗುತ್ತಿದ್ದಾರೆ. ಇಂತಹ ಸಮಸ್ಯೆಯನ್ನು ಸರಿಪಡಿಸಲು ರಾಜ್ಯ ಸರಕಾರವು ಉತ್ತಮ ನಿರ್ಧಾರವೊಂದಕ್ಕೆ ಬಂದಿದೆ. ಪಿಯಸಿ ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿಯೇ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ನೀಡುವಂತಹ ಕ್ರಮಕ್ಕೆ ಮುಂದಾಗಿದೆ. ಸರಕಾರದ ಈ ನಿರ್ಧಾರಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಈ ಯೋಜನೆ ಇನ್ನೂ ಪ್ರಸ್ತಾವನೆ ಹಂತದಲ್ಲಿದ್ದು, ಭವಿಷ್ಯದಲ್ಲಿ ಜಾರಿಗೆ ಬರಲಿದೆ.

ಏನಿದು ಯೋಜನೆ?: ಪ್ರತಿ ತಾಲೂಕಿಗೆ ಒಂದರಂತೆ ನೋಡಲ್‌ ಪದವಿ ಪೂರ್ವ ಕಾಲೇಜುಗಳನ್ನು ಗುರುತಿಸಿ ನೋಂದಾಯಿತ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ನೀಡಲು ಇಲಾಖೆ ಯೋಜನೆ ರೂಪಿಸಿದೆ. ಆಯಾ ಪದವಿ ಪೂರ್ವ ಕಾಲೇಜುಗಳು ತಮ್ಮ ವಿದ್ಯಾರ್ಥಿಗಳಿಗೆ ಇಂತಹ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸಬೇಕಿದೆ. ಈ ಯೋಜನೆಯನ್ನು ಮುಂಬರುವ ರಾಜ್ಯ ಬಜೆಟ್‌ನಲ್ಲಿ ಪ್ರಕಟಿಸುವ ಸಂಬಂಧ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ತೀರ್ಮಾನಿಸಿದೆ.

ಯಾವ ಪರೀಕ್ಷೆಗಳಿಗೆ ತರಬೇತಿ?: ರಾಜ್ಯ ಸರಕಾರವು ವಿವಿಧ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಭರ್ತಿ ಮಾಡುತ್ತದೆ. ಬಹುತೇಕ ಹುದ್ದೆಗಳಿಗೆ ಎಸ್‌ಎಸ್ಎಲ್‌ಸಿ, ಪಿಯುಸಿ ವಿದ್ಯಾರ್ಹತೆ ಬಯಸಲಾಗುತ್ತದೆ. ದ್ವಿತೀಯ ದರ್ಜೆ ಸಹಾಯಕರು, ಕೇಂದ್ರ ಸರಕಾರದ ಸಿ ಮತ್ತು ಡಿ ದರ್ಜೆಯ ಹುದ್ದೆಗಳಿಗೆ ನಡೆಸುವ ಪರೀಕ್ಷೆಗಳಿಗೆ ವಿದ್ಯಾರ್ಥಿಗಳು ಸಿದ್ಧತೆ ನಡೆಸಬಹುದು. ಈಗ ಸಿ ಮತ್ತು ಡಿ ದರ್ಜೆಯ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ, ಪಿಯುಸಿ ವಿದ್ಯಾರ್ಹತೆ ಸಾಕಾಗಿದ್ದರೂ ಪದವಿ ಇತ್ಯಾದಿ ಉನ್ನತ ಶಿಕ್ಷಣ ಪಡೆದವರೇ ಭಾಗಿಯಾಗುತ್ತಿದ್ದಾರೆ. ಪಿಯುಸಿ ಹಂತದಲ್ಲಿಯೇ ವಿದ್ಯಾರ್ಥಿಗಳಿಗೆ ಮಾಹಿತಿ ಕೊರತೆ ಇರುವುದು ಇದಕ್ಕೆ ಕಾರಣವಾಗಿದೆ. ಸುದ್ದಿಜಾಲ ತಾಣವು ತನ್ನ ವೆಬ್‌ಸೈಟ್‌ನಲ್ಲಿ ಉದ್ಯೋಗ ಮಾಹಿತಿಯನ್ನು ನೀಡುತ್ತ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವ ಕಾರ್ಯವನ್ನೂ ಮಾಡುತ್ತಿದೆ.
ಸರಕಾರದ ಹೊಸ ಯೋಜನೆ ಜಾರಿಗೆ ಬಂದರೆ ದ್ವಿತೀಯ ದರ್ಜೆ ಸಹಾಯಕರು, ಪ್ರಥಮ ದರ್ಜೆ ಸಹಾಯಕರು, ಗ್ರಾಮ ಪಂಚಾಯತಿ ಪಿಡಿಒ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ, ಎಸ್‌ಎಸ್‌ಸಿ , ಬ್ಯಾಂಕಿಂಗ್‌ ಪರೀಕ್ಷೆ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಮಾಹಿತಿ ಪಡೆಯಲಿದ್ದಾರೆ.

ಸದ್ಯ ಯಾವ ನೇಮಕಾತಿ ನಡೆಯುತ್ತಿದೆ?: ಸುದ್ದಿಜಾಲ ತಾಣವು ಇತ್ತೀಚಿನ ಎರಡು ಪ್ರಮುಖ ನೇಮಕಾತಿ ಕುರಿತು ವಿವರವಾದ ಮಾಹಿತಿ ಪ್ರಕಟಿಸಿದೆ. ಆ ಉದ್ಯೋಗಗಳ ಮಾಹಿತಿ ಪಡೆಯಲು ಈ ಮುಂದಿನ ಲಿಂಕ್‌ಗಳನ್ನು ಕ್ಲಿಕ್‌ ಮಾಡಿ.

KPTCL Recruitment 2022- ಕರ್ನಾಟಕ ವಿದ್ಯುತ್‌ ನಿಗಮದಲ್ಲಿ ಭರ್ಜರಿ ನೇಮಕ, 1492 ಹುದ್ದೆಗಳಿಗೆ ಅರ್ಜಿ ಆಹ್ವಾನ
MANMUL Recruitment 2022- ಮಂಡ್ಯ ಹಾಲು ಒಕ್ಕೂಟ ದಲ್ಲಿ ಭರ್ಜರಿ ನೇಮಕಾತಿ, 187 ಹುದ್ದೆಗಳಿಗೆ ಅರ್ಜಿ ಆಹ್ವಾನ