Karnataka Teachers Recruitment: 15,000 ಶಿಕ್ಷಕರ ನೇಮಕಾತಿಗೆ ಅಭ್ಯರ್ಥಿಗಳ ಪರಿಶೀಲನ ಪಟ್ಟಿ ಪ್ರಕಟ

Karnataka Teachers Recruitment: 5,000 ಶಿಕ್ಷಕರ ನೇಮಕಾತಿ ಪರೀಕ್ಷೆ ಫಲಿತಾಂಶ ಆಧರಿಸಿ ಮುಂದಿನ ವಾರಾಂತ್ಯದೊಳಗೆ 1:2 ಆಧಾರದಲ್ಲಿ ಅಭ್ಯರ್ಥಿಗಳ ಪರಿಶೀಲನಾ ಪಟ್ಟಿ ಪ್ರಕಟಿಸಲಾಗುತ್ತದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ. ನಾಗೇಶ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಪ್ರತಿ ಹುದ್ದೆಗೆ ಇಬ್ಬರು ಅಭ್ಯರ್ಥಿಗಳ ಆಯ್ಕೆಯಂತೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ನಂತರ ಒಂದು ಹುದ್ದೆಗೆ ಒಬ್ಬರಂತೆ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗುವುದು. ಶೀಘ್ರವೇ ಹೊಸ ಶಿಕ್ಷಕರ ನೇಮಕಾತಿ ಪೂರ್ಣಗೊಳಿಸಿ ಶಾಲೆಗಳಿಗೆ ಶಿಕ್ಷಕರನ್ನು ನಿಯೋಜಿಸಲಾಗುವುದು ಎಂದು ತಿಳಿಸಿದ್ದಾರೆ.