ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ನಲ್ಲಿ ಅರ್ಜಿ ಆಹ್ವಾನ

ಶಿವಮೊಗ್ಗ :

ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2022-23ನೇ ಸಾಲಿಗೆ ಮೆಟ್ರಿಕ್ ನಂತರದ (ಸ್ನಾತಕೋತ್ತರ ಹಾಗೂ ವೃತ್ತಿಪರ ಕೋರ್ಸುಗಳು) ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ.

ಆಸಕ್ತರು ಇಲಾಖಾ ವೆಬ್‍ಸೈಟ್ www.bcwd.karnataka.gov.in ರಲ್ಲಿ ನ್ಯೂವೆಬ್ ನವೆಂಬರ್ 10ರೊಳಗಾಗಿ ಸಲ್ಲಿಸುವುದು. ತಾಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ಪ್ರವೇಶಕ್ಕೆ ಬೇಕಾದ ಅರ್ಹತೆ, ದಾಖಲೆಗಳ ವಿವರಗಳನ್ನು ವೆಬ್‍ಸೈಟ್ ಮೂಲಕ ಪಡೆದುಕೊಳ್ಳುವುದು. ತಾಂತ್ರಿಕ ತೊಂದರೆಗಳಾದಲ್ಲಿ bcwd.hostels@karnataka.gov. ಗೆ ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ/ತಾಲೂಕು ಅಧಿಕಾರಿಗಳ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಲು ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಈ ಬಗ್ಗೆ ಹೆಚ್ಚಿನ ಮಾಹಿತಿಗೆ ಸಹಾಯವಾಣಿ 080-65970006/ 08182-222129 ಗಳನ್ನು ಸಂಪರ್ಕಿಸಬಹುದು.