BIGG NEWS : ಡಿ.14ರಂದು ಮಂಡ್ಯದಲ್ಲಿ ‘ಬೃಹತ್ ಉದ್ಯೋಗ ಮೇಳ’ : ಜಿಲ್ಲಾಧಿಕಾರಿ ಡಾ. ಗೋಪಾಲಕೃಷ್ಣ ಮಾಹಿತಿ

ಮಂಡ್ಯ :

ಡಿಸೆಂಬರ್ 14ರಂದು‌ ಮಂಡ್ಯ ಜಿಲ್ಲೆಯಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜನೆ ಎಂದು ಜಿಲ್ಲಾಧಿಕಾರಿ ಡಾ. ಹೆಚ್. ಎನ್. ಗೋಪಾಲಕೃಷ್ಣ ಮಾಹಿತಿ ನೀಡಿದ್ದಾರೆ
ಜಿಲ್ಲಾಡಳಿತ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ‌ ವತಿಯಿಂದ ಉದ್ಯೋಗ ಮೇಳ ಆಯೋಜನೆ ಮಾಡಲಾಗುತ್ತಿದ್ದು, 5000ಕ್ಕೂ ಹೆಚ್ಚು ಉದ್ಯೋಗ ಅವಕಾಶಗಳಿದ್ದು, 18 ರಿಂದ 35 ವರ್ಷದೊಳಗಿನ ವರ್ಷದೊಳಗಿನ ಎಸ್‌ಎಸ್‌ಎಲ್‌ಸಿ/ ಪಿಯುಸಿ/ ಐಟಿಐ/ ಡಿಪ್ಲೋಮಾ/ ಬಿಇ ಅಥವಾ ಯಾವುದೇ ಪದವೀಧರರು‌ ಉದ್ಯೋಗ ಮೇಳದಲ್ಲಿಪಾಲ್ಗೊಳ್ಳಬಹುದಾಗಿದೆ.

ಈ ಉದ್ಯೋಗ ಮೇಳದಲ್ಲಿ ಅಂದಾಜು 100ಕ್ಕೂ ಹೆಚ್ಚು ಪ್ರಸಿದ್ಧ ಕಂಪನಿಗಳು ಭಾಗವಹಿಸಲಿವೆ. ಮೇಳದಲ್ಲಿ ಪಾಲ್ಗೊಳ್ಳಲು ಬಯಸುವವರು ಹೆಸರು ನೋಂದಾಯಿಸಿಕೊಳ್ಳಿ

ಆಸಕ್ತರು https://skillconnect.kaushalkar.com/candidatereg ಲಿಂಕ್ ಮೂಲಕ ಹೆಸರು ನೋಂದಾಯಿಸಿಕೊಳ್ಳಬಹುದು. ಹೆಸರು ನೋಂದಾಯಿಸಿಕೊಳ್ಳಲು ಸಾಧ್ಯವಾಗದಿದ್ದರೂ ಸಹ ನೇರವಾಗಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ ಎಂದು ಸ್ಪಷ್ಟಪಡಿಸಲಾಗಿದೆ.
ಅಭ್ಯರ್ಥಿಗಳು ತಮ್ಮ ಸ್ವವಿವರವನ್ನು ksdc.recruitment@gmail.comಗೆ ಸಲ್ಲಿಸಬೇಕು.

ಉದ್ಯೋಗ ಮೇಳ ನಡೆಯುವ ಸ್ಥಳ; ಡಿಸೆಂಬರ್ 14ರಂದು 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪಿಇಎಸ್ ಇಂಜಿನಿಯರಿಂಗ್ ಕಾಲೇಜು ಆವರಣ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08232-295010, 9164443223, 8152882461 ಸಂಪರ್ಕಿಸಬಹುದು.