ಇನ್ಫೋಸಿಸ್ ಫೌಂಡೇಶನ್ ನ ಅಧ್ಯಕ್ಷ ಸ್ಥಾನ ತ್ಯಜಿಸಿದ ‘ ಸುಧಾಮೂರ್ತಿ’ – ಸುದ್ದಿಜಾಲ ನ್ಯೂಸ್

ಬೆಂಗಳೂರು : ಇನ್ಫೋಸಿಸ್ ಫೌಂಡೇಶನ್ ನ ಅಧ್ಯಕ್ಷೆ ಮತ್ತು ಭಾರತದ ಅತಿದೊಡ್ಡ ಮಾಹಿತಿ ತಂತ್ರಜ್ಞಾನ ( ಐಟಿ) ಕಂಪನಿಗಳಲ್ಲಿ ಒಂದಾದ ಇನ್ಫೋಸಿಸ್ ನ ಸುಧಾ ಮೂರ್ತಿ ಅವರು ಶುಕ್ರವಾರ ಇನ್ಫೋಸಿಸ್ ಫೌಂಡೇಶನ್ ನ ಅಧ್ಯಕ್ಷೆ ಹುದ್ದೆಯನ್ನು ತ್ಯಜಿಸಲು ನಿರ್ಧರಿಸಿದ್ದಾರೆ.

ಸುಧಾಮೂರ್ತಿಯವರು ತಮ್ಮ ವೃತ್ತಿಪರ ಜೀವನವನ್ನು ಕಂಪ್ಯೂಟರ್ ವಿಜ್ಞಾನಿ ಮತ್ತು ಎಂಜಿನಿಯರ್ ಆಗಿ ಪ್ರಾರಂಭ ಮಾಡಿದ ಇವರು ನಂತರ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದರು. ಇಷ್ಟು ಮಾತ್ರವಲ್ಲದೇ ‘ ಬಿಲ್ ಗೇಟ್ಸ್ ಪ್ರತಿಷ್ಠಾನ’ ದ ಸಾರ್ವಜನಿಕ ಆರೋಗ್ಯ ಉಪಕ್ರಮಗಳ ಸದಸ್ಯ ಕೂಡಾ ಆಗಿದ್ದಾರೆ. ಟೆಲ್ಕೋ ದಲ್ಲಿ ಡೆವೆಲಪ್ಮೆಂಟ್ ಇಂಜಿನಿಯರ್ ಆಗಿ ದುಡಿದಿದ್ದಾರೆ. ಟೆಲ್ಕೋಗೆ ಪ್ರವೇಶ ಪಡೆದ ಪ್ರಥಮ ಮಹಿಳಾ ಇಂಜಿನಿಯರ್ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಸುಧಾ ಮೂರ್ತಿ ಅವರು ಟೆಲ್ಕೋದ ಪುಣೆ, ಮುಂಬಯಿ ಹಾಗೂ ಜಮ್ ಶೆಡ್ ಪುರ ಶಾಖೆಗಳಲ್ಲಿ ಡೆವಲಪ್ಮೆಂಟ್ ಇಂಜಿನಿಯರ್ ಆಗಿ ಸೇವೆ ಸಲ್ಲಿಸಿದ್ದಾರೆ. ಪುಣೆಯ ವಾಲಚಂದ ಗ್ರೂಪ್ ಆಫ್ ಇಂಡಸ್ಟ್ರೀಸ್ ನಲ್ಲಿ ಸೀನಿಯರ್ ಸಿಸ್ಟಮ್ಸ್ ಅನಾಲಿಸ್ಟ್ ಆಗಿ ಕೆಲ ಕಾಲ ಸೇವೆ ಸಲ್ಲಿಸಿದ್ದಾರೆ.

ಹಲವು ದಶಕಗಳಿಂದ ಸಲ್ಲಿಸುತ್ತಿರುವ ಸಮಾಜ ಸೇವೆಯನ್ನು ಮುಂದುವರಿಸಿಕೊಂಡು ಹೋಗಲು ಸುಧಾಮೂರ್ತಿ ನಿರ್ಧರಿಸಿದ್ದಾರೆ ಎನ್ನಲಾಗಿದೆ.