ಅಪಘಾತದಿಂದಾಗಿ ಮೂಕನಾದವನಿಗೆ ಕೊರೊನಾ ವ್ಯಾಕ್ಸಿನ್ ನಿಂದ ಮಾತು ಬಂತು !!!

ಜಾರ್ಖಂಡ್ : ಕೋವಿಡ್ ವ್ಯಾಕ್ಸಿನ್, ಕೋವಿಶೀಲ್ಡ್ ಪಡೆದ ನಂತರ ವ್ಯಕ್ತಿಯೋರ್ವನಿಗೆ ನಿಂತು ಹೋಗಿದ್ದ ಮಾತು ಪುನಃ ಬಂದಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ.

ಜಾರ್ಖಂಡ್ ರಾಜ್ಯದ ಬೊಕಾರೊದಲ್ಲಿ ಕೋವಿಡ್ ಲಸಿಕೆ ಕೋವಿಶೀಲ್ಡ್ ಪಡೆದ ವಾರದ ನಂತರ ವ್ಯಕ್ತಿಯೋರ್ವನ ದೇಹದಲ್ಲಿ ಹೊಸ ರೀತಿಯ ಬದಲಾವಣೆ ಕಾಣಿಸಿಕೊಂಡಿದ್ದು, ಕಳೆದ ಐದು ವರ್ಷಗಳ ನಂತರ‌ ಆತನಿಗೆ ಮಾತು ಮರಳಿ ಬಂದಿದೆ. ಅಷ್ಟೇ ಅಲ್ಲ ಆತನ ದೇಹದ ಕೆಲವೊಂದು ಮೂಳೆಗಳು ಕೆಲಸ ಮಾಡಲು ಶುರು ಮಾಡಿದೆ. ಹೌದು ಇಡೀ ಪ್ರಪಂಚದ ಜನರ ನೆಮ್ಮದಿ ಹಾಳು ಮಾಡಿರುವ ಕೊರೊನಾ ಇದೀಗ ಈ ಮೂಲಕ ಒಬ್ಬ ವ್ಯಕ್ತಿಯ ಮಾತು ಬರುವ ಹಾಗೆ ಮಾಡಿದ್ದು ಆಶ್ಚರ್ಯವೇ ಸರಿ.

ಕೆಲವು ವಾರಗಳ ಹಿಂದೆ ಅಂಗನವಾಡಿ ಕಾರ್ಯಕರ್ತೆಯೊಬ್ಬರು ನರ್ಸ್ ಜೊತೆ ಸೇರಿ 55 ವರ್ಷದ ದುಲರ್ ಚಂದ್ ಮುಂಡಾ ಅವರಿಗೆ ಕೋವಿಶೀಲ್ಡ್ ವ್ಯಾಕ್ಸಿನ್ ನೀಡಿದ್ದಾರೆ. ಇದಾದ ಬಳಿಕ ಈ ಎಲ್ಲ ಬದಲಾವಣೆಗಳು ಕಂಡಿದೆ. ಸಲ್ಗಡಿ ಗ್ರಾಮದ ದುಲರ್ ಚಂದ್ ಮುಂಡಾ ಐದು ವರ್ಷಗಳ ಹಿಂದೆ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಐವರು ಚಿಕಿತ್ಸೆಯ ನಂತರ ಗುಣಮಖರಾಗಿದ್ದರೂ ದೈಹಿಕ ನ್ಯೂನತೆಗಳಿಂದಾಗಿ ಹಾಸಿಗೆ ಹಿಡಿದಿದ್ದರು. ದಿನದಿಂದ ದಿನಕ್ಮೆ ಅವರ ಧ್ವನಿಯೂ ಕ್ಷೀಣಿಸಲು ಶುರುವಾಯಿತು. ಮಾತನಾಡಲು ತೊದಲುತ್ತಿದ್ದರು.

ಜನವರಿ‌ 4 ರಂದು ಕೋವಿಡ್ ಮೊದಲ ಡೋಸ್ ಆಗಿ ಕೋವಿಶೀಲ್ಡ್ ಲಸಿಕೆ ನೀಡಲಾಗಿದೆ. ಇದಾದ ಬಳಿಕ ದೇಹದಲ್ಲಿ ಅನೇಕ ರೀತಿಯ ಬದಲಾವಣೆ ಕಾಣಿಸಿಕೊಂಡಿದ್ದು, ಸ್ಪಷ್ಟವಾಗಿ ಮಾತನಾಡುವುದರ ಜೊತೆಗೆ, ದೇಹದ ಮೂಳೆಗಳು ಕೂಡಾ ಕೆಲಸ ಮಾಡುತ್ತಿವೆ ಎಂದು ತಿಳಿದು ಬಂದಿದೆ.