ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಮನೆಗೆ ಇಡಿ ದಾಳಿ ಬೆನ್ನಲ್ಲೇ, ರೋಷನ್ ಬೇಗ್ ಮನೆಗೂ ಇಡಿ ದಾಳಿ

ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಮನೆಗೆ ಜಾರಿ ನಿರ್ದೆಶನಾಲಯ ಅಧಿಕಾರಿಗಳು ದಾಳಿ ಮಾಡಿದ ಬೆನ್ನಲ್ಲೇ ಮಾಜಿ ಸಚಿವ ರೋಷನ್ ಬೇಗ್ ಮನೆ ಮೇಲೂ ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ರೋಷನ್ ಬೇಗ್ ಅವರ ಶಿವಾಜಿನಗರದ ಮನೆಯ ಮೇಲೆ ಐಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಮೂಲಗಳ ಮೂಲಕ ತಿಳಿದು ಬಂದಿದೆ. 6 ಕಡೆ ಏಕಕಾಲದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ ವಿದೇಶಿ ವ್ಯವಹಾರಗಳು ಕಂಡು ಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ಸಿಆರ್ ಪಿಎಫ್ ಭದ್ರತೆ ನೇತೃತ್ವದಲ್ಲಿ ಇಡಿ‌ ಅಧಿಕಾರಿಗಳು ಶಿವಾಜಿನಗರದಲ್ಲಿರುವ ಮನೆ ಮೇಲೆ ದಾಳಿ ಮಾಡಿದ್ದಾರೆ.

ರೋಷನ್ ಬೇಗ್ ಇಡಿ ದಾಳಿಯ ವೇಳೆಯಲ್ಲಿ ಮನೆಯಲ್ಲೇ ಇದ್ದರು ಎನ್ನಲಾಗಿದೆ. ಅಧಿಕಾರಿಗಳು ಎಲ್ಲಾ ಲಾಕರ್ ಗಳನ್ನು ಓಪನ್‌ ಮಾಡಿಸಿ, ದಾಖಲೆಗಳನ್ನು ವಶಕ್ಕೆ ಪಡೆದುಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ.

ಬೆಂಗಳೂರಿನ ಭೂಪಸಂದ್ರದಲ್ಲಿರುವ ರೋಷನ್‌ ಬೇಗ್ ಪುತ್ರಿಯ ಮನೆಯ ಮೇಲೂ ಇಡಿ ಅಧಿಕಾರಗಳು ದಾಳಿ‌ನಡೆಸಿದ್ದಾರೆ.